Thursday, August 6, 2026
Homeತಾಜಾ ಸುದ್ದಿಆಗಸ್ಟ್ 14 ರಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಸಾಧ್ಯತೆ

ಆಗಸ್ಟ್ 14 ರಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಆಗಸ್ಟ್ 14 ರಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ನಿನ್ನೆ ರಾತ್ರಿ ಸಭಾಪತಿ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ಆಹ್ವಾನಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ವೇಳೆ ರಾಜೀನಾಮೆ ನೀಡುವಂತೆ ಸಲಹೆ ಮಾಡಿದ್ದಾರೆ. ಮಾತುಕತೆ ವೇಳೆ ಆರೋಗ್ಯ ಸಚಿವ ಯು.ಟಿ. ಖಾದರ್ ಕೂಡಾ ಉಪಸ್ಥಿತರಿದ್ದರು.

ಈಗಾಗಲೇ ಸಭಾಪತಿ ಹುದ್ದೆಗೆ ವಿಧಾ‌ನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್ ಅವರನ್ನು ಆಡಳಿತ ಪಕ್ಷ ಕಾಂಗ್ರೆಸ್ ಹೆಸರಿಸಿದ್ದು, ಅವಿಶ್ವಾಸ ನಿಲುವಳಿ ತರಲು ಅವಕಾಶವಾಗದಂತೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದೆ.

ಆಗಸ್ಟ್ 13 ರಿಂದ ವಿಧಾನ ಪರಿಷತ್ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, 14 ರಂದು ಉಪಸಭಾಪತಿ ಸ್ಥಾನದ ಚುನಾವಣೆ ನಡೆಯಲಿದೆ. ಉಪಸಭಾಪತಿ ನೇಮಕದ ಬಳಿಕ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ನಿರ್ಧರಿಸಿದ್ದಾರೆ.

- Advertisement -

Latest News

error: Content is protected !!