Friday, August 7, 2026
Homeಕರಾವಳಿಮಂಗಳೂರುಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನಾ ನಿಧನ

ಮಂಗಳೂರು ವಿವಿ ವಿಶ್ರಾಂತ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನಾ ನಿಧನ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ (MCJ) ವಿಶ್ರಾಂತ ಪ್ರಾಧ್ಯಾಪಕಿ ಹಾಗೂ ಮಾಜಿ ವಿಭಾಗ ಮುಖ್ಯಸ್ಥೆ ಡಾ. ವಹೀದಾ ಸುಲ್ತಾನಾ (70) ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಸುಮಾರು ಮೂರು ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು, ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಮಾಧ್ಯಮ ರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು. ಮಾಧ್ಯಮ, ತಂತ್ರಜ್ಞಾನ ಹಾಗೂ ಮಹಿಳಾ ಅಧ್ಯಯನ ಕ್ಷೇತ್ರಗಳಲ್ಲಿ ಆಳವಾದ ಸಂಶೋಧನೆ ನಡೆಸಿದ್ದ ಅವರು, ಬಾಂಗ್ಲಾದೇಶ, ಮಲೇಷ್ಯಾ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಬಂಧ ಮಂಡಿಸಿದ್ದರು. ಅಲ್ಲದೆ, ‘ಏಷ್ಯನ್ ಕಾಂಗ್ರೆಸ್ ಫಾರ್ ಮೀಡಿಯಾ ಆ್ಯಂಡ್ ಕಮ್ಯುನಿಕೇಶನ್’ ಸಂಸ್ಥೆಯ ರಾಷ್ಟ್ರೀಯ ಸಮಿತಿಯ ಉಪ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು.

ಡಾ. ವಹೀದಾ ಸುಲ್ತಾನಾ ಅವರ ನಿಧನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ (MAM), ಬೋಧಕ ವೃಂದ ಹಾಗೂ ಮಾಧ್ಯಮ ರಂಗದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ.

- Advertisement -

Latest News

error: Content is protected !!