- Advertisement -


- Advertisement -
ಬೆಂಗಳೂರು: ವಿಧಾನ ಪರಿಷತ್ನ ನೂತನ ಸದಸ್ಯೆಯಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಶುಕ್ರವಾರ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಐವನ್ ಡಿ’ಸೋಜಾ ಹಾಗೂ ಹೆಚ್.ಪಿ. ಸುಧಾಮದಾಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು
- Advertisement -


