Friday, August 7, 2026
Homeಕರಾವಳಿಉಡುಪಿಹೆಬ್ರಿ ಸಮೀಪ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

ಹೆಬ್ರಿ ಸಮೀಪ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

- Advertisement -
- Advertisement -

ಹೆಬ್ರಿ, ಆ.7: ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಯ ನಡುವೆ ಹೆಬ್ರಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ರಸ್ತೆ ಬದಿಯ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹೆಬ್ರಿ ಸಂತೆಕಟ್ಟೆ ನಿವಾಸಿ ಸದಾನಂದ ನಾಯಕ್ ಎಂದು ಗುರುತಿಸಲಾಗಿದೆ.


ಹೆಬ್ರಿಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದ ವೇಳೆ ಹುರ್ತುಕೆ ಎಂಬ ಪ್ರದೇಶದಲ್ಲಿ ರಸ್ತೆ ಬದಿಯ ಬೃಹತ್ ಮರವೊಂದು ಏಕಾಏಕಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದ ಸದಾನಂದ ನಾಯಕ್ ಅವರಿಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಘಟನೆಯ ಬಳಿಕ ಕ್ರೇನ್ ಸಹಾಯದಿಂದ ಮರವನ್ನು ತೆರವುಗೊಳಿಸಿ, ಕಾರಿನೊಳಗೆ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಲು ಹರಸಾಹಸ ಪಡಬೇಕಾಯಿತು. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!