Sunday, August 9, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ. ಮತ್ತು ತಂಡ ಸಿಬ್ಬಂದಿಯೊಂದಿಗೆ ಆ‌.8 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ವ್ಯಕ್ತಿಯೊಬ್ಬ ಅಮಲಿನಲ್ಲಿರುವಂತೆ ಕಂಡುಬಂದಿದ್ದಾನೆ. ಪೊಲೀಸರು ಆತನನ್ನು ವಿಚಾರಿಸಿದಾಗ ಸಮರ್ಪಕವಾಗಿ ಉತ್ತರಿಸದೆ ನಶೆಯ ಅಮಲಿನಲ್ಲಿ ಮಾತನಾಡುತ್ತಿದ್ದ ಎನ್ನಲಾಗಿದೆ.

ಪದೇ ಪದೇ ವಿಚಾರಣೆ ನಡೆಸಿದಾಗ ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ವಿಚಾರಣೆಯಲ್ಲಿ ಆತ ತನ್ನನ್ನು ಉಜಿರೆ ಗ್ರಾಮದ ಹಳೆಪೇಟೆಯ ವಿನಾಯಕ ನಗರದ ನಿವಾಸಿ ಸೀತಾರಾಮ ಮಗ ಅರುಣ್ ಕುಮಾರ್ (36) ಎಂದು ತಿಳಿಸಿದ್ದಾನೆ.

ಬಳಿಕ ಆತನನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ ಡಿಪಿಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!