- Advertisement -


- Advertisement -
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಶೂಟೌಟ್ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಉಡುಪಿ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಕಸ್ಟಡಿಗೆ ನೀಡಲಾದ ಆರೋಪಿಗಳು. ಕಾಪು ಸಿಐ ಅಝ್ಮತ್ ಅಲಿ ನೇತೃತ್ವದ ತಂಡವು ಆರೋಪಿಗಳನ್ನು ನ್ಯಾಯಾಧೀಶ ಪುರುಷೋತ್ತಮ ಅವರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಕೋರಿತ್ತು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಅವಧಿಯಲ್ಲಿ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು, ನೆರವಾದ ಸ್ಥಳೀಯರು ಹಾಗೂ ಶೂಟೌಟ್ ಹಿಂದಿರುವ ಗ್ಯಾಂಗ್ಸ್ಟರ್ಗಳ ಜಾಲದ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸಲಿದ್ದಾರೆ.
- Advertisement -


