Tuesday, August 11, 2026
Homeಕರಾವಳಿಮಂಗಳೂರುಪುತ್ತೂರು: ಚಿನ್ನದ ಕೆಲಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಚಿನ್ನದ ಕೆಲಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಪುತ್ತೂರು: ನಗರದ ಕೋರ್ಟ್ ರಸ್ತೆಯ ಕಟ್ಟಡವೊಂದರಲ್ಲಿ ಕಳೆದ ಎಂಟು ವರ್ಷಗಳಿಂದ ಚಿನ್ನದ ಕಸೂತಿ (ಆಭರಣ ಕೆಲಸ) ಮಾಡುತ್ತಿದ್ದ ರಾಜಸ್ಥಾನ ಮೂಲದ ಮುಖೇಶ್ ದಾಕಡ (38) ಅವರು ತೀವ್ರ ಹೃದಯಾಘಾತದಿಂದ ಆ.10ರಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.

ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ ಮುಖೇಶ್ ಅವರಿಗೆ ನಸುಕಿನ ವೇಳೆಯಲ್ಲಿ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು ಆರೋಗ್ಯ ಹದಗೆಟ್ಟಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!