Wednesday, August 12, 2026
Homeಕರಾವಳಿವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವು

ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವು

- Advertisement -
- Advertisement -

ಕಾಸರಗೋಡು: ಗೆಳೆಯರೊಂದಿಗೆ ಕೆರೆಗೆ ಸ್ನಾನ ಮಾಡಲು ತೆರಳಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಉಪ್ಪಳ ಪೆರಿಂಗಡಿಯ ಅಲಿ ಮತ್ತು ದುಲೈಕಾ ದಂಪತಿಯ ಪುತ್ರ, ಮಂಗಲ್ಪಾಡಿ ಸರಕಾರಿ ಹೈಸ್ಕೂಲ್‌ನ ವಿದ್ಯಾರ್ಥಿ ಅಬೂಬಕರ್ ಅಸಾನ್ (13) ಮೃತಪಟ್ಟ ಬಾಲಕ.

ಮಂಗಳವಾರ ಸಂಜೆ 5 ಗಂಟೆಯ ಸುಮಾರಿಗೆ ಮನೆಯ ಸಮೀಪದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಬೂಬಕರ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದಾಗ, ಉಳಿದವರೆಲ್ಲರೂ ಸ್ನಾನ ಮುಗಿಸಿ ದಡಕ್ಕೆ ಮರಳಿದ್ದರು. ಆದರೆ ಅಬೂಬಕರ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದನು. ತಕ್ಷಣವೇ ಸುತ್ತಮುತ್ತ ಹುಡುಕಾಟ ನಡೆಸಿದರೂ ಆತನ ಸುಳಿವು ಸಿಗಲಿಲ್ಲ. ಬಳಿಕ ಆತ ನೀರಿನಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ.

- Advertisement -

Latest News

error: Content is protected !!