Wednesday, August 12, 2026
Homeಕೊಡಗುಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ ಎ‌.ಎಸ್. ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ.ಶಾಸಕ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಇಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಪೊನ್ನಣ್ಣ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಹೆಸರಿಸಿತ್ತು‌. ಆದರೆ ಡೆಪ್ಯುಟಿ ಸ್ಪೀಕರ್ ಆಗಲು ಒಪ್ಪದ ಪೊನ್ನಣ್ಣ ಪರೋಕ್ಷವಾಗಿ ತಮ್ಮ ಬೇಸರ ವ್ಯಕ್ತಪಡಿಸಿದ್ದರು.

ಇದೀಗ ಡೆಪ್ಯುಟಿ ಸ್ಪೀಕರ್ ಸ್ಥಾ‌ನಕ್ಕೆ ಮಾಜಿ ಸಚಿವ ಮತ್ತು ಭಟ್ಕಳ ಶಾಸಕ ಮಂಕಾಳ ವೈದ್ಯ ಅವರು ನೇಮಕಗೊಳ್ಳುವ ಸಾಧ್ಯತೆ ಇದೆ.ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಶಾಸಕ ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು

- Advertisement -

Latest News

error: Content is protected !!