Friday, August 14, 2026
Homeಪ್ರಮುಖ-ಸುದ್ದಿಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆ: ಹಲವೆಡೆ ಶೋಧ ಕಾರ್ಯ ತೀವ್ರ

ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆ: ಹಲವೆಡೆ ಶೋಧ ಕಾರ್ಯ ತೀವ್ರ

- Advertisement -
- Advertisement -

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರ ರಾಜಧಾನಿ ದೆಹಲಿಯ ದೆಹಲಿ ಹೈಕೋರ್ಟ್, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3, ಜಾಮ್‌ನಗರ್ ಹೌಸ್, ಜಂಡೇವಾಲನ್‌ನ ಕಟ್ಟಡವೊಂದು, ಸಾಕೇತ್‌ನಲ್ಲಿರುವ ಕಚೇರಿ ಹಾಗೂ ದೆಹಲಿ ಕಂಟೋನ್ಮೆಂಟ್ ಎಸ್‌ಡಿಎಂ ಕಚೇರಿ ಸೇರಿದಂತೆ ಒಟ್ಟು ಆರು ಪ್ರಮುಖ ಸ್ಥಳಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಬೆದರಿಕೆ ಬಂದ ಬೆನ್ನಲ್ಲೇ ಅಗ್ನಿಶಾಮಕ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಈ ಸಂದೇಶಗಳ ಸತ್ಯಾಸತ್ಯತೆಯನ್ನು ಕಂಡುಕೊಳ್ಳಲು ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಇದುವರೆಗಿನ ತನಿಖೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!