- Advertisement -


- Advertisement -
ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಹೋರಿಗಳ ನಡುವಿನ ಕಾದಾಟಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ವರಿ (29) ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಮಲ್ಲಾಪುರ ಗ್ರಾಮದ ಸುಭದ್ರ ಹೋಟೆಲ್ ಬಳಿ ಎರಡು ಹೋರಿಗಳು ಪರಸ್ಪರ ಕಾದಾಡುತ್ತಿದ್ದವು. ಈ ಸಂದರ್ಭದಲ್ಲಿ ಹೋರಿಯೊಂದು ರಾಜೇಶ್ವರಿ ಅವರಿಗೆ ಬಲವಾಗಿ ಗುದ್ದಿದ ಪರಿಣಾಮ, ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


