Friday, August 14, 2026
Homeಪ್ರಮುಖ-ಸುದ್ದಿಕೇಂದ್ರ ಸಚಿವ ಜೆ.ಪಿ. ನಡ್ಡಾ ಆರೋಗ್ಯದಲ್ಲಿ ಏರುಪೇರು: ಏಮ್ಸ್ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಜೆ.ಪಿ. ನಡ್ಡಾ ಆರೋಗ್ಯದಲ್ಲಿ ಏರುಪೇರು: ಏಮ್ಸ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಹೊಸದಿಲ್ಲಿ: ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ, ಅವರನ್ನು ಗುರುವಾರ ಚಿಕಿತ್ಸೆಗಾಗಿ ದಿಲ್ಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ದಾಖಲಾದ ತಕ್ಷಣ ವೈದ್ಯರ ತಂಡ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಕರೊನರಿ ಆ್ಯಂಜಿಯೊಗ್ರಫಿ ಸೇರಿದಂತೆ ವಿವಿಧ ಅಗತ್ಯ ಪರೀಕ್ಷೆಗಳನ್ನು ಕೈಗೊಂಡಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುನ್ನೆಚ್ಚರಿಕೆಯಾಗಿ ಹಾಗೂ ನಿರಂತರ ನಿಗಾ ವಹಿಸಲು ಅವರನ್ನು ಆಸ್ಪತ್ರೆಯ ಹೃದ್ರೋಗ (ಕಾರ್ಡಿಯಾಲಜಿ) ವಿಭಾಗದಲ್ಲಿ ಇರಿಸಲಾಗಿದೆ ಎಂದು ಏಮ್ಸ್ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

- Advertisement -

Latest News

error: Content is protected !!