
ಚಾಮರಾಜನಗರ: ಅರಣ್ಯ ಇಲಾಖೆ ಗುಂಡಿಗೆ ಮೂವರು ಕಳ್ಳ ಬೇಟೆಗಾರರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು ಜಿಂಕೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಬೇಳೆ
ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಅರಣ್ಯ ಸಿಬ್ಬಂದಿ ಶರಣಾಗುವಂತೆ ಸೂಚಿಸಿದ್ದು ಆಗ ಬೇಟೆಗಾರರು ಕಾವೇರಿ ವನ್ಯಜೀವಿಧಾಮ ಅರಣ್ಯ ಸಿಬ್ಬಂದಿ ಮೇಲೆಯೆ ಗುಂಡು ಹಾರಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದು ಮೂವರು ಮೃತಪಟ್ಟು ಓರ್ವ ಗಾಯಗೊಂಡಿದ್ದಾನೆ.
ಮೃತರು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾಗಿದ್ದು, ಗ್ರಾಮಸ್ಥರು ಸಿಟ್ಟಿಗೆದ್ದು ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದು, ಹೆಚ್ಚಿನ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ.
ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಗಾಯಾಳುವಿಗೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಸು ಹುಡುಕಲು ಹೋಗಿದ್ದವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಮೃ


