- Advertisement -


- Advertisement -
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಅಭಿಲಾಷ್ ಎಂದು ಗುರುತಿಸಲಾಗಿದೆ. ಮಾಡಾವು ಕೊಯಿಲ ಕಡೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಬೈಕ್ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Advertisement -


