- Advertisement -


- Advertisement -
ಬೆಳ್ತಂಗಡಿ: ರೆಖ್ಯಾ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಒತ್ತಾಯಿಸಿ, ಶಾಸಕರಾದ ಹರೀಶ್ ಪೂಂಜ ಅವರು ರೆಖ್ಯಾ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರ ನಿಯೋಗದೊಂದಿಗೆ ಆ.18 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯಿಂದ ಸ್ಥಳೀಯ ಗ್ರಾಮಸ್ಥರು ಎದುರಿಸುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದ ಶಾಸಕರು, ಸಮಸ್ಯೆಯನ್ನು ಶೀಘ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಬಗೆಹರಿಸುವಂತೆ ಒತ್ತಾಯಿಸಿದರು.ಈ ಸಂದರ್ಭದಲ್ಲಿ ರೆಖ್ಯಾ ಗ್ರಾಮದ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು
- Advertisement -


