
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್‌ನಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 303(2) ಅಡಿಯಲ್ಲಿ ಪ್ರಕರಣದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲ ಕೋಡಿ ಬೈತುಲ್ ಕೌಸರ್ ನ್ಯೂ ತೋಟ ಹೌಸ್ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್(40 ವರ್ಷ) ಎಂದು ಗುರುತಿಸಲಾಗಿದೆ.ಕೋಡಿಕ್ಕಲ್‌ನ ಮನೆಯೊಂದರ ಎದುರು ಪಾರ್ಕ್ ಮಾಡಲಾಗಿದ್ದ KA-19-EB-2226 ನೋಂದಣಿಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಕುರಿತು ಜುಲೈ 24ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಯ ಚಹರೆಯನ್ನು ಗುರುತಿಸಿ, ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿದ್ದರು.ಈ ಮೂಲಕ ಆರೋಪಿಯ ಜಾಡು ಪತ್ತೆಹಚ್ಚಿದ ಪೊಲೀಸರು ಆಗಸ್ಟ್ 18ರಂದು ಆರೋಪಿಯನ್ನು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಮಹಮ್ಮದ್ ಫೈಜಲ್ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೇ ಮಂಗಳೂರು ಉತ್ತರ, ಕೊಣಾಜೆ, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಗ್ರಾಮಾಂತರ ಹಾಗೂ


