Wednesday, August 19, 2026
Homeತಾಜಾ ಸುದ್ದಿಕಾಂಗ್ರೆಸ್ ನ ಯಾವ ಕಾರ್ಯಕ್ರಮಗಳಲ್ಲೂ ಪೂರ್ಣ ಗೀತೆ ಹಾಡಲ್ಲ; ದೆಹಲಿಯಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ   

ಕಾಂಗ್ರೆಸ್ ನ ಯಾವ ಕಾರ್ಯಕ್ರಮಗಳಲ್ಲೂ ಪೂರ್ಣ ಗೀತೆ ಹಾಡಲ್ಲ; ದೆಹಲಿಯಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ   

- Advertisement -
- Advertisement -

ನವದೆಹಲಿ: ಕಾಂಗ್ರೆಸ್‌ನ ಯಾವುದೇ ಕಾರ್ಯಕ್ರಮಗಳಲ್ಲೂ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡುವುದಿಲ್ಲ, ಕೇವಲ ಎರಡು ಪ್ಯಾರಾಗಳನ್ನು (ಸ್ಟ್ಯಾಂಜಾ) ಮಾತ್ರ ಹಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮೊದಲಿನಿಂದಲೂ ವಂದೇ ಮಾತರಂ ಗೀತೆಯ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಹಾಡಿಕೊಂಡು ಬಂದಿದ್ದೇವೆ ಮತ್ತು ಕಾಂಗ್ರೆಸ್‌ನ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲೂ ಸಂಪೂರ್ಣ ಗೀತೆಯನ್ನು ಹಾಡುವುದಿಲ್ಲ ಎಂದು ತಿಳಿಸಿದರು.

ಈ ನಿಯಮಕ್ಕೆ ನಾವು ಬದ್ಧರಾಗಿದ್ದೇವೆ, ಇದಕ್ಕಾಗಿ ನಮ್ಮನ್ನು ನೇಣಿಗೆ ಹಾಕಿದರೂ ಅಥವಾ ಜೈಲಿಗೆ ಹಾಕಿದರೂ ಸರಿ, ನಾವು ಹಾಡುವುದೇ ಎರಡು ಪ್ಯಾರಾ ಮಾತ್ರ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ರಾಷ್ಟ್ರೀಯ ಸಮಾವೇಶಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಭಾಗಗಳನ್ನು ಮಾತ್ರ ಬಳಸುವ ಪದ್ಧತಿಯನ್ನು ಅನುಸರಿಸಿಕೊಂಡು ಬಂದಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಸೋನಿಯಾ ಗಾಂಧಿ ಅವರ ಮೇಲಿನ ಆರೋಪಗಳನ್ನು ತಳ್ಳಿಹಾಕಿದರು ಹಾಗೂ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಈ ರೀತಿಯ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

- Advertisement -

Latest News

error: Content is protected !!