Thursday, August 20, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ಶೆಟ್ಟಿ ನಿಧನ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ಶೆಟ್ಟಿ ನಿಧನ

- Advertisement -
- Advertisement -

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವಕ್ತಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರಾಗಿದ್ದ ಲಕ್ಷ್ಮಣ್ ಶೆಟ್ಟಿ (52) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದುವ ಮೂಲಕ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಶ್ರಮಿಸಿದ್ದರು.

ಅವರ ಹಠಾತ್ ನಿಧನಕ್ಕೆ ಹಿರಿಯ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಜನಾರ್ದನ ಪೂಜಾರಿ, ಬಿ.ಕೆ. ಹರಿಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಂಜುನಾಥ ಭಂಡಾರಿ, ಕೆ. ಹರೀಶ್ ಕುಮಾರ್, ಬಿ. ಇಬ್ರಾಹೀಂ, ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ ಗೌಡ, ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಪಿ.ವಿ. ಮೋಹನ್, ಜೆ.ಆರ್. ಲೋಬೊ, ಶಕುಂತಲಾ ಶೆಟ್ಟಿ, ಪದ್ಮರಾಜ್ ಪೂಜಾರಿ, ಎಂ.ಎಸ್. ಮುಹಮ್ಮದ್, ಜಿ.ಎ. ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ. ಶಹೀದ್ ಹಾಗೂ ಲಾವಣ್ಯ ಬಳ್ಳಾಲ್ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

- Advertisement -

Latest News

error: Content is protected !!