Friday, August 21, 2026
Homeಕರಾವಳಿಮಂಗಳೂರುಬೆಳ್ಳಾರೆ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ದಂಡ ವಿಧಿಸಿ ಕೋರ್ಟ್ ತೀರ್ಪು

ಬೆಳ್ಳಾರೆ: ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ದಂಡ ವಿಧಿಸಿ ಕೋರ್ಟ್ ತೀರ್ಪು

- Advertisement -
- Advertisement -

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 35,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಶಿಕ್ಷೆಗೆ ಗುರಿಯಾದ ದೋಷಿ. ದಂಡ ತೆರಲು ವಿಫಲವಾದರೆ ಹೆಚ್ಚುವರಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆದೇಶಿಸಿದ್ದಾರೆ.

ಘಟನೆಯ ವಿವರ: 2020ರಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅವರು ಸರ್ಕಾರಿ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದೆ.

- Advertisement -

Latest News

error: Content is protected !!