Friday, August 21, 2026
Homeಕರಾವಳಿಮಂಗಳೂರುಶೀಘ್ರದಲ್ಲೇ ವೆನ್ಲಾಕ್ ಆಸ್ಪತ್ರೆ ಉನ್ನತೀಕರಣ; ವಿಧಾನ ಪರಿಷತ್ ನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ

ಶೀಘ್ರದಲ್ಲೇ ವೆನ್ಲಾಕ್ ಆಸ್ಪತ್ರೆ ಉನ್ನತೀಕರಣ; ವಿಧಾನ ಪರಿಷತ್ ನಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ

- Advertisement -
- Advertisement -

ಬೆಂಗಳೂರು: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಆದಷ್ಟು ಶೀಘ್ರ ಉನ್ನತೀಕರಣ ಮಾಡುವುದಾಗಿ ಆರೋಗ್ಯ ಇಲಾಖೆ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಇಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆಗೆ ಉತ್ತರಿಸಿದ ಸಚಿವ ಖಾದರ್, ಉನ್ನತೀಕರಣಕ್ಕೆ 100 ಕೋಟಿ ರೂಪಾಯಿಗಳ ಯೋಜನೆಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಏಳು ಜಿಲ್ಲೆಗಳಿಂದ ರೋಗಿಗಳು ಬರುತ್ತಿದ್ದು, ರೋಗಿಗಳ ಸಂಖ್ಯೆ ಜಾಸ್ತಿಯಾಗಿ ವ್ಯವಸ್ಥೆ ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರದ ಗಮನಕ್ಕೆ ತಂದ ಐವಾನ್ ಡಿಸೋಜ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಿಂದಲೂ ಮಂಗಳೂರಿಗೆ ಬರುತ್ತಿದ್ದು, ಅಲ್ಲಿ ಸೌಲಭ್ಯಗಳ ಮಂಗಳೂರಿಗೆ ಬರುತ್ತಿದ್ದಾರೆ ಎಂದು ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.

- Advertisement -

Latest News

error: Content is protected !!