Saturday, August 22, 2026
Homeಕರಾವಳಿಮಂಗಳೂರುಪುಂಜಾಲಕಟ್ಟೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪೊಲೀಸರ ಬಲೆಗೆ!

ಪುಂಜಾಲಕಟ್ಟೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪೊಲೀಸರ ಬಲೆಗೆ!

- Advertisement -
- Advertisement -

ಪುಂಜಾಲಕಟ್ಟೆ : ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಚಿಕ್ಕಮಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಚಿಕ್ಕಮಗಳೂರು ತಾಲೂಕು ಮೂಡಿಗೆರೆ ಗ್ರಾಮದ ಬಾಪುನಗರ ನಿವಾಸಿ ಶಬೀರ್ (41) (ತಂದೆ: ಇಬ್ರಾಹಿಂ) ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ:

ಆರೋಪಿ ಶಬೀರ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಅಕ್ರಮ ಮರಳು ಸಾಗಣೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಬೆಳ್ತಂಗಡಿಯ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿದ್ದರೂ, ಆರೋಪಿ ಕಳೆದ 9 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ಪತ್ತೆಗೆ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.

ಪೊಲೀಸ್ ಕಾರ್ಯಾಚರಣೆ:

ಬೆಳ್ತಂಗಡಿ ಉಪವಿಭಾಗದ ಉಪಾಧೀಕ್ಷಕರಾದ ರೋಹಿಣಿ ಹಾಗೂ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಪುಂಜಾಲಕಟ್ಟೆ ಪಿಎಸ್‌ಐ ರಾಜೇಶ್ ಕೆ.ವಿ. ಅವರ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಠಾಣೆಯ ಹೆಚ್.ಸಿ ರಾಜೇಶ್, ಪಿಸಿ ಚೋಳಪ್ಪ ಸಂಶಿ ಹಾಗೂ ಪಿಸಿ ನಾಗರಾಜ್ ಅವರಿದ್ದ ಪೊಲೀಸ್ ತಂಡವು ಚಿಕ್ಕಮಗಳೂರಿನ ಎ.ಪಿ.ಎಂ.ಸಿ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಿದೆ.

14 ದಿನ ನ್ಯಾಯಾಂಗ ಬಂಧನ:

ಬಂಧಿತ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ (ಸೆಪ್ಟೆಂಬರ್ 03, 2026ರವರೆಗೆ) ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

- Advertisement -

Latest News

error: Content is protected !!