Monday, August 24, 2026
Homeಪ್ರಮುಖ-ಸುದ್ದಿದಿಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ಜಲಾವೃತ; 15 ವಿಮಾನಗಳ ಮಾರ್ಗ ಬದಲಾವಣೆ

ದಿಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ಜಲಾವೃತ; 15 ವಿಮಾನಗಳ ಮಾರ್ಗ ಬದಲಾವಣೆ

- Advertisement -
- Advertisement -

ಸೋಮವಾರ ದಿಲ್ಲಿ ಹಾಗೂ ಎನ್‌ಸಿಆರ್‌ (NCR) ವಲಯದಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ತೀವ್ರ ಅಡ್ಡಿಯುಂಟಾಗಿದ್ದು, 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿ ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಪೈಕಿ 12 ವಿಮಾನಗಳನ್ನು ಜೈಪುರಕ್ಕೆ, 2 ವಿಮಾನಗಳನ್ನು ಚಂಡಿಗಢಕ್ಕೆ ಹಾಗೂ 1 ವಿಮಾನವನ್ನು ಲಕ್ನೋಗೆ ಕಳುಹಿಸಲಾಗಿದೆ.

ಉತ್ತರ ಭಾರತದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು ನೋಯ್ಡಾ, ಗಾಝಿಯಾಬಾದ್, ಗುರುಗ್ರಾಮ ಮತ್ತು ಫರಿದಾಬಾದ್‌ನಲ್ಲಿ ಭಾರಿ ಮಳೆಯಾಗಿದೆ. ಇದರಿಂದಾಗಿ ಪ್ರಮುಖ ರಸ್ತೆಗಳು ಜಲಾವೃತಗೊಂಡು ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ.

- Advertisement -

Latest News

error: Content is protected !!