Monday, August 24, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹51.45 ಲಕ್ಷ ಅನುದಾನ ಮಂಜೂರು:...

ಬೆಳ್ತಂಗಡಿ ತಾಲೂಕಿನ 2 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹51.45 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಒಟ್ಟು ₹51.45 ಲಕ್ಷ ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಕಾಶಿಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗಳಿಗೆ ₹34.30 ಲಕ್ಷ ಹಾಗೂ ನಿಟ್ಟಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ಕೊಠಡಿಗೆ ₹17.15 ಲಕ್ಷ ಅನುದಾನ ಸಿಕ್ಕಿದೆ. ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ಷಿತ್ ಶಿವರಾಂ ಧನ್ಯವಾದ ಅರ್ಪಿಸಿದ್ದಾರೆ.

- Advertisement -

Latest News

error: Content is protected !!