Thursday, August 27, 2026
HomeUncategorizedವಿಪಕ್ಷಗಳ ಪಾದಯಾತ್ರೆ ಬೆದರಿಕೆ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಮುಹೂರ್ತ?

ವಿಪಕ್ಷಗಳ ಪಾದಯಾತ್ರೆ ಬೆದರಿಕೆ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಮುಹೂರ್ತ?

- Advertisement -
- Advertisement -

ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಸರ್ಕಾರದ ಮುಜುಗರ ತಪ್ಪಿಸಲು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ವಿಪಕ್ಷ ಬಿಜೆಪಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಸೆಪ್ಟೆಂಬರ್ 1ರಿಂದ 10ರ ವರೆಗೆ ರಾಯಚೂರಿನಿಂದ ಬಳ್ಳಾರಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿ.ವೈ. ವಿಜಯೇಂದ್ರ ಹಾಗೂ ಆರ್‌. ಅಶೋಕ್ ಘೋಷಿಸಿದ್ದಾರೆ.

ಇನ್ನೊಂದೆಡೆ ಸಚಿವರ ವಿರುದ್ಧ ತನಿಖೆಗೆ ಸಿಬಿಐ ಮತ್ತು ಇ.ಡಿ. ಅನುಮತಿ ಕೋರಿರುವ ಪ್ರಸ್ತಾವನೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ರವಾನಿಸಿರುವುದು ಸಂಪುಟವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದು, ಬುಧವಾರ ಸಂಜೆಯೇ ಪತ್ರ ಸಲ್ಲಿಸುವ ಸಾಧ್ಯತೆಯಿದೆ.

- Advertisement -

Latest News

error: Content is protected !!