Wednesday, August 26, 2026
Homeಕರಾವಳಿತೀವ್ರ ಜ್ವರದಿಂದ ಬಳಲುತ್ತಿದ್ದ ಐಟಿಐ ವಿದ್ಯಾರ್ಥಿ ಸಾವು

ತೀವ್ರ ಜ್ವರದಿಂದ ಬಳಲುತ್ತಿದ್ದ ಐಟಿಐ ವಿದ್ಯಾರ್ಥಿ ಸಾವು

- Advertisement -
- Advertisement -

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಿ.ಸಿ. ರೋಡಿನ ಕೆಂಪುಗುಡ್ಡೆ ನಿವಾಸಿ ಹಾಗೂ ಬಂಟ್ವಾಳ ಐಟಿಐ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಆರಂಭದಲ್ಲಿ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಕಡಿಮೆಯಾಗದೆ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯರು ಚಿಕಿತ್ಸೆ ಮುಂದುವರಿಸಿದರೂ ಅವರ ಆರೋಗ್ಯ ಸ್ಥಿತಿ ಸುಧಾರಿಸದೆ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!