Thursday, August 27, 2026
Homeತಾಜಾ ಸುದ್ದಿನೇಪಾಳ ದುರಂತದಲ್ಲಿ ನಾಪತ್ತೆಯಾದವರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ನೇಪಾಳ ದುರಂತದಲ್ಲಿ ನಾಪತ್ತೆಯಾದವರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

- Advertisement -
- Advertisement -

​ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಸಹ ಒದಗಿಸಿದೆ.

​ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಇ-ಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಲ್ಲದೇ, ಭಾರತೀಯರಿಗೆ ತುರ್ತು ನೆರವು ನೀಡಲು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಹಾಗೂ ನೆರವು ಪಡೆಯಬಹುದಾಗಿದೆ.

ದುರಂತ ಸಂಬಂಧ ​ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

- Advertisement -

Latest News

error: Content is protected !!