ಕೇರಳದ ಎರ್ನಾಕುಲಂ ಜಿಲ್ಲೆಯ ಕಕ್ಕೂರ್ ಬಳಿ ಗುರುವಾರ 35 ಪ್ರಯಾಣಿಕರಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ, ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಲಡಿಯಿಂದ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರನೊಬ್ಬ ಯಾವುದೇ ಮುನ್ಸೂಚನೆ ನೀಡದೆ ದಿಢೀರನೆ ಬಲಕ್ಕೆ ತಿರುವು ಪಡೆದುಕೊಂಡಿದ್ದರಿಂದ ಆತನನ್ನು ರಕ್ಷಿಸಲು ಬಸ್ ಚಾಲಕ ತಕ್ಷಣವೇ ಬ್ರೇಕ್ ಹಾಕಿ ವಾಹನವನ್ನು ಪಕ್ಕಕ್ಕೆ ತಿರುಗಿಸಿದಾಗ ಈ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಹಲವು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದು, ತಕ್ಷಣವೇ ಸ್ಥಳೀಯರು ಧಾವಿಸಿ ಅವರನ್ನು ಹೊರತೆಗೆದು ಆಂಬ್ಯುಲೆನ್ಸ್‌ಗಳ ಮೂಲಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಅಪಘಾತದ ಸಮಯದಲ್ಲಿ ಪೆಟ್ರೋಲ್ ಬಂಕ್ ಆವರಣದಲ್ಲಿ ಇತರ ವಾಹನಗಳಾಗಲಿ ಅಥವಾ ಸಾರ್ವಜನಿಕರಾಗಲಿ ಇಲ್ಲದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.


