- Advertisement -
- Advertisement -
ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ.
ನಾಪತ್ತೆಯಾದವರಲ್ಲಿ ಹೆಚ್ಚಿನವರು ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ಭಕ್ತರಾಗಿದ್ದಾರೆ. ಕೆಲವೇ ಗಂಟೆಗಳಲ್ಲಿ ಸಾಲು ಸಾಲು ಪಟ್ಟಣಗಳೇ ಕೊಚ್ಚಿಹೋಗಿದ್ದು, ರಾಸುವಾ ಪ್ರದೇಶ ಒಂದರಲ್ಲೇ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಸಾವಿರಾರು ಕುಟುಂಬಗಳು ವಸತಿ ಕಳೆದುಕೊಂಡಿದ್ದು, ಇನ್ನು ಅನೇಕ ಜನರು ನಾಪತ್ತೆಯಾಗಿರುವುದರಿಂದ ಆಸ್ತಿ ಮತ್ತು ಜೀವಹಾನಿಯ ಸಂಪೂರ್ಣ ಪ್ರಮಾಣವನ್ನು ಅಂದಾಜಿಸುವ ಕಾರ್ಯ ಪ್ರಗತಿಯಲ್ಲಿದೆ.
- Advertisement -


