- Advertisement -
- Advertisement -
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ. ಉಪಮುಖ್ಯಮಂತ್ರಿ ಮತ್ತು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ 101 ತಾಲೂಕುಗಳನ್ನು ಬರ ಪೀಡಿತ ಎಂದು ಅಧಿಕೃತ ಘೋಷಣೆ ಮಾಡಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಒಟ್ಟು 134 ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲು ಪೂರಕ ಅಂಶಗಳಿದ್ದು, 134 ತಾಲೂಕುಗಳಿಗೂ ರಾಜ್ಯ ಸರ್ಕಾರಿಂದ ಅಧ್ಯಯನ ತಂಡಗಳನ್ನು ಕಳುಹಿಸಲಾಗಿತ್ತು.
ಜಿಲ್ಲಾಧಿಕಾರಿಗಳ ತಂಡಗಳ ವರದಿ ಅನ್ವಯ 101 ತಾಲೂಕುಗಳನ್ನು ಗುರುತಿಸಲಾಗಿದ್ದು, 89 ತಾಲೂಕುಗಳಲ್ಲಿ ತೀವ್ರ ಬರ ಹಾಗೂ 12 ತಾಲೂಕುಗಳಲ್ಲಿ ಸ್ವಲ್ಪ ಬರ ಎಂದು ವಿಂಗಡಿಸಲಾಗಿದೆ.
ರಾಜ್ಯದ ಪಾಲಿನ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಡಿಸಿಎಂ ಡಾ. ಪರಮೇಶ್ವರ ಹೇಳಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
- Advertisement -


