- Advertisement -
- Advertisement -
ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆ ತರಲು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಆರೋಗ್ಯ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ.
ಈ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಉಪಸಮಿತಿಯು ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರುವುದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕುವುದು ಮತ್ತು ಸಕಾಲದಲ್ಲಿ ಪರೀಕ್ಷೆಗಳನ್ನು ನಡೆಸಿ ನೇಮಕಾತಿ ಪೂರ್ಣಗೊಳಿಸಲು ನಿರ್ದಿಷ್ಟ ವೇಳಾಪಟ್ಟಿಯನ್ನು ರೂಪಿಸುವ ಪ್ರಮುಖ ಉದ್ದೇಶಗಳನ್ನು ಹೊಂದಿದೆ.
- Advertisement -


