- Advertisement -
- Advertisement -
ಮಂಗಳೂರು: ನಗರದ ಹೊರವಲಯದ ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ನಡೆದಿದೆ.ಕಡಬ ತಾಲೂಕಿನ ಕಾಣಿಯೂರು ನಿವಾಸಿ ಮನ್ವಿತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಖಾಸಗಿ ಕಾಲೇಜಿನಲ್ಲಿ ತೃತೀಯ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮನ್ವಿತ್, ಅರ್ಕುಳದ ತುಪ್ಪೆಕಲ್ಲುವಿನಲ್ಲಿ ಕೊಠಡಿ ಬಾಡಿಗೆಗೆ ಪಡೆದು ವಾಸ್ತವ್ಯವಿದ್ದ. ಬುಧವಾರ ತಾನು ತಂಗಿದ್ದ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾನೆ.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -


