Friday, August 28, 2026
Homeಕರಾವಳಿಕಾಸರಗೋಡುಕಾಸರಗೋಡು:ಓಣಂ ಆಚರಣೆ ವೇಳೆ ದುರಂತ: ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಕಾಸರಗೋಡು:ಓಣಂ ಆಚರಣೆ ವೇಳೆ ದುರಂತ: ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

- Advertisement -
- Advertisement -

ಕಾಸರಗೋಡು: ಓಣಂ ಆಚರಣೆಯ ವೇಳೆ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ 15 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಚೀಮೇನಿ ಗ್ರಾಮದ ಆನಿಕ್ಕಾಡಿ ನಿವಾಸಿ, ಚೆರುವತ್ತೂರಿನ ತಿಮಿರಿಯ ಮಹಾಕವಿ ಕುಟ್ಟಮಠ ಸ್ಮಾರಕ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಸನೂಪ್ (15) ಮೃತಪಟ್ಟ ದುರ್ದೈವಿ.

ಗುರುವಾರ ರಾತ್ರಿ ಚೀಮೇನಿಯ ಚೆಂಬ್ರಕಾಣಂನಲ್ಲಿ ನಡೆದ ಓಣಂ ಕಾರ್ಯಕ್ರಮಕ್ಕೆ ತೆರಳಿದ್ದ ಸನೂಪ್, ಸ್ನೇಹಿತರೊಂದಿಗೆ ತೆರಳಿದ್ದಾಗ ಆಕಸ್ಮಿಕವಾಗಿ ಮುಚ್ಚದ ಬಾವಿಗೆ ಬಿದ್ದಿದ್ದಾನೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಚೀಮೇನಿ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನನ್ನು ಬಾವಿಯಿಂದ ಹೊರತೆಗೆದು, ಸಿಪಿಆರ್ ನೀಡಿ ಚೆರುವತ್ತೂರಿನ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರಿನ ಆಸ್ಟರ್ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.

- Advertisement -

Latest News

error: Content is protected !!