Saturday, August 29, 2026
Homeಕರಾವಳಿಕಲ್ಕೂರ ಪ್ರತಿಷ್ಠಾನದಿಂದ ಮಂಗಳೂರಿನಲ್ಲಿ ಸೆ.4ರಂದು 'ಶ್ರೀ ಕೃಷ್ಣ ವೇಷ ಸ್ಪರ್ಧೆ': 44 ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಯಲ್ಲಿ...

ಕಲ್ಕೂರ ಪ್ರತಿಷ್ಠಾನದಿಂದ ಮಂಗಳೂರಿನಲ್ಲಿ ಸೆ.4ರಂದು ‘ಶ್ರೀ ಕೃಷ್ಣ ವೇಷ ಸ್ಪರ್ಧೆ’: 44 ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಯಲ್ಲಿ ಪ್ರವೇಶ ಉಚಿತ

- Advertisement -
- Advertisement -

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯ ಸಹಯೋಗದೊಂದಿಗೆ ಕದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಹಾಗೂ ‘ಶ್ರೀ ಕೃಷ್ಣ ವೇಷ ಸ್ಪರ್ಧೆ’ಯನ್ನು ಸೆಪ್ಟೆಂಬರ್ 4ರಂದು ಬೆಳಿಗ್ಗೆ 9 ಗಂಟೆಯಿಂದ ಆಯೋಜಿಸಲಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕೃಷ್ಣಾಷ್ಟಮಿಯಂದು ಒಟ್ಟು 44 ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ಜರುಗಲಿವೆ ಎಂದು ತಿಳಿಸಿದರು.

ಬೆಳಿಗ್ಗೆ ಶ್ರೀ ಕೃಷ್ಣ ವೈಭವ, 10:30ಕ್ಕೆ ಮೊಸರು ಕಡೆಯುವ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಲಿದ್ದು, ರಾತ್ರಿ 12 ಗಂಟೆಗೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮತ್ತು ಪ್ರಸಾದ ವಿತರಣೆಯೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ.

- Advertisement -

Latest News

error: Content is protected !!