Monday, August 31, 2026
Homeಕರಾವಳಿಆಟೋ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಆಟೋ ಡಿಕ್ಕಿಯಾಗಿ ಬೈಕ್ ಸವಾರ ಸಾವು

- Advertisement -
- Advertisement -

ಬಂಟ್ವಾಳ: ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂಬ ಯುವಕ ಮೃತಪಟ್ಟಿದ್ದಾರೆ.

ನಂದಾವರ ಶಾಲೆಯ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ರಶೀಕ್, ಸಜಿಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ಶಿವಾಜಿ ಕುಮಾರ್ ಎಂಬುವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ರಶೀಕ್ ಅವರನ್ನು ಸ್ಥಳೀಯರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಝೈನುಲ್ ಆಬಿದೀನ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!