- Advertisement -
- Advertisement -
ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆಯೋಗದ ಸದಸ್ಯೆ ಶಾಂತ ಹೊಸಮನಿ ಅವರ ವಿರುದ್ಧ ಸಿಐಡಿ ಪೊಲೀಸರು ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಶಿವಶಂಕರಪ್ಪ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ್ದ ವೇಳೆ ಶಾಂತ ಹೊಸಮನಿ ಅವರ ಮನೆಯ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ದಾಳಿಯ ನಂತರದಿಂದ ಶಾಂತ ಹೊಸಮನಿ ಅವರು ನಾಪತ್ತೆಯಾಗಿದ್ದು, ಇಡಿ ಅಥವಾ ಸಿಐಡಿ ಅಧಿಕಾರಿಗಳು ನಡೆಸುತ್ತಿರುವ ಯಾವುದೇ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಯಿಂದ ತಪ್ಪಿಸಿಕೊಂಡು ವಿದೇಶಕ್ಕೆ ಪರಾರಿಯಾಗುವುದನ್ನು ತಡೆಯಲು ಸಿಐಡಿ ಪೊಲೀಸರು ದೇಶಾದ್ಯಂತ ಈ ಕಟ್ಟುನಿಟ್ಟಿನ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
- Advertisement -


