- Advertisement -
- Advertisement -
ಶಿವಮೊಗ್ಗ: ಪೋಷಕರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 14 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದ ಸೃಷ್ಟಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಂದೆ-ತಾಯಿ ಪೂಜೆಗಾಗಿ ದೇವಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಈ ಕೃತ್ಯ ಎಸಗಿದ್ದಾಳೆ. ಪೋಷಕರು ಪೂಜೆ ಮುಗಿಸಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
“ಪೋಷಕರು ಪದೇ ಪದೆ ಓದುವಂತೆ ಒತ್ತಡ ಹೇರುತ್ತಿದ್ದದ್ದೇ ನನ್ನ ನಿರ್ಧಾರಕ್ಕೆ ಕಾರಣ” ಎಂದು ವಿದ್ಯಾರ್ಥಿನಿ ಡೆತ್‌ನಾಟ್‌ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -


