Tuesday, September 1, 2026
HomeUncategorizedಮಂಗಳೂರು:17 ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

ಮಂಗಳೂರು:17 ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಯೆಂದು ಸುಳ್ಳು ಪರಿಚಯ ಮಾಡಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಆರೋಪದಲ್ಲಿ ಬಂಧಿತರಾಗಿ, ಜಾಮೀನಿನ ಬಳಿಕ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿವಿಧ ಹೆಸರುಗಳನ್ನು ಬಳಸಿಕೊಂಡು ಹಣಕಾಸು ವಿವಾದ, ಬ್ಯಾಂಕ್ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿದವರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. 2019ರಲ್ಲಿ ಮಂಗಳೂರಿನ ಪಂಪ್‌ವೆಲ್ ಲಾಡ್ಜ್‌ನಲ್ಲಿ ಸಿಸಿಬಿ ಪೊಲೀಸರು ಸ್ಯಾಮ್ ಪೀಟರ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು.
ಆತನ ವಿರುದ್ಧ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಂಚನೆಗೆ ಸಂಬಂಧಿಸಿದ ಸುಮಾರು 17 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ‘ರಾಹುಲ್ ಪೀಟರ್’ ಹೆಸರಿನಲ್ಲಿ 2001ರಿಂದ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!