Friday, September 4, 2026
Homeಕರಾವಳಿಮಂಗಳೂರುಮಂಗಳೂರು:ಪಣಂಬೂರು ಎಂಸಿಎಫ್ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಮಂಗಳೂರು:ಪಣಂಬೂರು ಎಂಸಿಎಫ್ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

- Advertisement -
- Advertisement -

ಮಂಗಳೂರು: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರಿನ ಎಂಸಿಎಫ್ (MCF) ಬಳಿ ಶುಕ್ರವಾರ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ಬಸ್ಸು ಎಂಸಿಎಫ್ ಬಳಿ ತಲುಪುತ್ತಿದ್ದಂತೆ ಚಕ್ರ ರಸ್ತೆ ಬದಿಯ ಚರಂಡಿಗೆ ಇಳಿದ ಪರಿಣಾಮ ಸರ್ವಿಸ್ ರಸ್ತೆಗೆ ಮಗುಚಿ ಬಿದ್ದಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!