Friday, September 4, 2026
Homeಕರಾವಳಿಮಂಗಳೂರುಪುತ್ತೂರು;ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಅಂತಾರಾಜ್ಯ ಕಳ್ಳನ ಬಂಧನ, ಬೈಕ್ ಮತ್ತು ಕಾಣಿಕೆ ಡಬ್ಬಿ...

ಪುತ್ತೂರು;ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಅಂತಾರಾಜ್ಯ ಕಳ್ಳನ ಬಂಧನ, ಬೈಕ್ ಮತ್ತು ಕಾಣಿಕೆ ಡಬ್ಬಿ ವಶ!

- Advertisement -
- Advertisement -

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಂತಾರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕೇರಳದ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ. ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್‌ ಕುಮಾರ ಬಿ. ಅವರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದರು. ಆಗಸ್ಟ್ 24ರ ರಾತ್ರಿ ದೇವಸ್ಥಾನದ ಹೊರಭಾಗದಲ್ಲಿದ್ದ ಸುಮಾರು ₹4,500 ನಗದು ಒಳಗೊಂಡಿದ್ದ ಕಾಣಿಕೆ ಡಬ್ಬಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಕಳವು ಮಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಭಾಗಗಳಲ್ಲಿ ಸಿಸಿಟಿವಿ ಮತ್ತು ಸಿಡಿಆರ್ ನೆರವಿನಿಂದ ತನಿಖೆ ನಡೆಸಿ, ಬದಿಯಡ್ಕದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಕಳವು ಮಾಡಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ₹1 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಈತನ ವಿರುದ್ಧ ಈಗಾಗಲೇ ಬದಿಯಡ್ಕ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣವೂ ದಾಖಲಾಗಿದೆ.

ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ನಿರ್ದೇಶನದಲ್ಲಿ, ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ಗುಣಪಾಲ ಜೆ., ಸುಷ್ಮಾ ಜಿ. ಭಂಡಾರಿ ಹಾಗೂ ಸಿಬ್ಬಂದಿಗಳ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

- Advertisement -

Latest News

error: Content is protected !!