Saturday, September 5, 2026
Homeಕರಾವಳಿಮಂಗಳೂರು ಅಂಚೆ ವಿಭಾಗದಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ

ಮಂಗಳೂರು ಅಂಚೆ ವಿಭಾಗದಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ

- Advertisement -
- Advertisement -

ಮಂಗಳೂರು ಅಂಚೆ ವಿಭಾಗದಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಹಾಗೂ ಢಾಕ್ ಸೇವಕ್ ಸೇರಿದಂತೆ ಒಟ್ಟು 28 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ತೇರ್ಗಡೆಯಾಗಿರಬೇಕು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು (ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ವಿಷಯವಾಗಿ ಓದಿದವರಿಗೂ ಅವಕಾಶವಿದೆ). ಆಸಕ್ತರು https://indiapost.gov.in/gdsonlineengagement

ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು, ಆನ್‌ಲೈನ್ ನೋಂದಣಿಗೆ ಆ. 30 ರಿಂದ ಸೆ. 19 ರವರೆಗೆ ಹಾಗೂ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಸೆ. 2 ರಿಂದ 21 ರವರೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ https://indiapostgdsonline.gov.in

ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಬಲ್ಮಠದಲ್ಲಿರುವ ಮಂಗಳೂರು ವಿಭಾಗೀಯ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು.

- Advertisement -

Latest News

error: Content is protected !!