ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ (Leaders Meet) ಕಾರ್ಯಕ್ರಮವು ಬೆಳ್ತಂಗಡಿಯ ಜಮೀಯತುಲ್ ಫಲಾಹ್ ಸಭಾಂಗಣ ಹಾಗೂ ಪುಂಜಾಲಕಟ್ಟೆಯ ಪಕ್ಷದ ಕಚೇರಿಯಲ್ಲಿ ಸೆ.8 ರಂದು ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು ಸಂದೇಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲ್ ಅವರು ಸಮಾರೋಪ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ರಶೀದ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಮುಸ್ತಫಾ ಜಿ.ಕೆ. ಹಾಗೂ ಅಶ್ರಫ್ ಕಟ್ಟೆ, ಬ್ಲಾಕ್ ಅಧ್ಯಕ್ಷರಾದ ಆಸೀಫ್ ಪುಂಜಾಲಕಟ್ಟೆ, ಹಂಝರಾಲಿ ಎಸ್.ಕೆ., ಫಝಲ್ ಉಜಿರೆ ಹಾಗೂ ಸಲೀಂ ಲಾಯಿಲ ಸೇರಿದಂತೆ ಪಕ್ಷದ ವಿವಿಧ ಬ್ಲಾಕ್ ಹಾಗೂ ಬ್ರಾಂಚ್ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


