Wednesday, September 9, 2026
Homeಕರಾವಳಿಮಂಗಳೂರುಪುತ್ತೂರು: ಪ್ರಯಾಣಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆಟೋ ಚಾಲಕ ಪೊಲೀಸ್ ವಶಕ್ಕೆ

ಪುತ್ತೂರು: ಪ್ರಯಾಣಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆಟೋ ಚಾಲಕ ಪೊಲೀಸ್ ವಶಕ್ಕೆ

- Advertisement -
- Advertisement -

ಪುತ್ತೂರು: ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಾಲಕನನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂತ್ರಸ್ತ ಮಹಿಳೆಯು ಸೆಪ್ಟೆಂಬರ್ 9ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟು, ಪರಿಚಯದ ಬಾಲಕೃಷ್ಣ ಎಂಬವರ KA-21-B-2011 ನೋಂದಣಿಯ ಆಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕ ಬಾಲಕೃಷ್ಣ ಮಾರ್ಗ ಬದಲಿಸಿ, ಆಟೋವನ್ನು ಕುರಿಯ ಎಂಬಲ್ಲಿಗೆ ತಂದು ನಿಲ್ಲಿಸಿದ್ದಾನೆ. ಬಳಿಕ ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಸಂತ್ರಸ್ತ ಮಹಿಳೆ ನೀಡಿದ ದೂರಿನನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ: 117/2026, ಕಲಂ: 74, 75, 64 BNS ಕಾಯ್ದೆ) ದಾಖಲಾಗಿದೆ.

ಕಾರ್ಯಾಚರಣೆ ನಡೆಸಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಬಾಲಕೃಷ್ಣನನ್ನು ಸಂಟ್ಯಾರ್ ಪರ್ಪುಂಜ ಬಳಿ ವಶಕ್ಕೆ ಪಡೆದು, ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!