- Advertisement -
- Advertisement -
ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರ ಆರೋಪಿಗೆ ನಕಲಿ ಆಧಾರ್ ಕಾರ್ಡ್ ನೀಡಿ ಜಾಮೀನು ಕೊಡಿಸಲು ಯತ್ನಿಸಿದ ಗಂಭೀರ ಆರೋಪದಡಿ ಇಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತರು.
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೋಮಾನ್ ಎಂಬ ಆರೋಪಿಗೆ ಜಾಮೀನು ಪಡೆಯಲು, ಪ್ರಶಾಂತ್ ಎಂಬುವವರ ಆಧಾರ್ ಕಾರ್ಡ್ಗೆ ಕೆ.ಟಿ. ಮೊಹಮ್ಮದ್ ಎಂಬವರ ಹೆಸರು ಹಾಗೂ ವಿಳಾಸವನ್ನು ನಕಲಿಯಾಗಿ ಎಡಿಟ್ ಮಾಡಿ ಹಾಜರುಪಡಿಸಲಾಗಿತ್ತು. ಈ ವಂಚನೆ ಬೆಳಕಿಗೆ ಬರುತ್ತಿದ್ದಂತೆಯೇ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ನಕಲಿ ದಾಖಲೆ ಸೃಷ್ಟಿಸಿದ ಉಮ್ಮರ್ ಫಾರೂಕ್ ಹಾಗೂ ಆತನಿಗೆ ಸಹಕರಿಸಿದ ನಿಶಾಂತ್ನನ್ನು ಬಂಧಿಸಿದ್ದಾರೆ.ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಇಬ್ಬರೂ ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
- Advertisement -


