- Advertisement -
- Advertisement -
ಬೆಳ್ತಂಗಡಿ: ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾಗಿ, ಹಲವರು ಗಾಯಗೊಂಡಿರುವ ಘಟನೆ ಸೆ. 12ರಂದು ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಹಾಗೂ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಸೇರಿದಂತೆ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಸಂಪೂರ್ಣ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -


