Wednesday, September 16, 2026
Homeಕರಾವಳಿಕೆಡಿಪಿ ಸಭೆಗೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರಿಗೆ ಸಚಿವ ಯು.ಟಿ. ಖಾದರ್ ಆಕ್ರೋಶ

ಕೆಡಿಪಿ ಸಭೆಗೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರಿಗೆ ಸಚಿವ ಯು.ಟಿ. ಖಾದರ್ ಆಕ್ರೋಶ

- Advertisement -
- Advertisement -

ಮಂಗಳೂರು: ಇಲ್ಲಿನ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಗೈರುಹಾಜರಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಭೆಗೆ ಖುದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಜರಾಗುವ ಬದಲು, ತಮ್ಮ ಪ್ರತಿನಿಧಿಯಾಗಿ ಡಿಸಿಪಿ ಸ್ಯಾಂ ವರ್ಗೀಸ್ ಅವರನ್ನು ಕಳುಹಿಸಿಕೊಟ್ಟಿದ್ದರು. ಇದರಿಂದ ತೀವ್ರ ಆಕ್ರೋಶಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, “ಕಮಿಷನರ್ ಅವರು ಸಭೆಗೆ ಗೈರಾಗಲು ಸೂಕ್ತ ಅನುಮತಿ ಪಡೆದಿದ್ದಾರೆಯೇ? ಸಾರ್ವಜನಿಕರಿಗೆ ಹಾಗೂ ಸಮಾಜಕ್ಕೆ ಕಾನೂನಿನ ಪಾಠ ಮಾಡುವ ಅಧಿಕಾರಿಗಳಿಗೆ ಈ ನಿಯಮಗಳು ಅನ್ವಯಿಸುವುದಿಲ್ಲವೇ?” ಎಂದು ವೇದಿಕೆಯಲ್ಲೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ಸಭೆಯ ಗೈರುಹಾಜರಿ ವಿಚಾರವನ್ನು ಮುಂದಿಟ್ಟುಕೊಂಡು ಸಚಿವರ ಸಹಿತ ಕೆಲ ನಾಯಕರು ಗರಂ ಆಗಿದ್ದರೂ, ಸುಧೀರ್ ಕುಮಾರ್ ರೆಡ್ಡಿ ಅವರು ಕರಾವಳಿ ಭಾಗದಲ್ಲಿ ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರುವಾಸಿಯಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿದ್ದ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕುವಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇವರು ತೋರಿದ ಕಟ್ಟುನಿಟ್ಟಿನ ಕ್ರಮಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ.

ಆದರೆ, ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿರುವ ಈ ದಕ್ಷ ಅಧಿಕಾರಿಯನ್ನು ಇಲ್ಲಿಂದ ವರ್ಗಾವಣೆ ಮಾಡಲು ಕಳೆದ ಒಂದು ವರ್ಷದಿಂದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ—ಎರಡೂ ಕಡೆಯಿಂದಲೂ ತೆರೆಮರೆಯ ಕಸರತ್ತುಗಳು ನಡೆಯುತ್ತಲೇ ಇವೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

- Advertisement -

Latest News

error: Content is protected !!