- Advertisement -
- Advertisement -
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಪ್ರಕಟವಾಗಿದೆ.
ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಅನುಪಮ ಕೊಡುಗೆ ಮತ್ತು ಹಲವು ತಲೆಮಾರುಗಳಿಗೆ ನೀಡಿದ ಸ್ಫೂರ್ತಿಯನ್ನು ಗೌರವಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನಟ ಅನಂತ್ ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಕೇಂದ್ರ ವಾರ್ತಾಶಾಖೆ PIB ತನ್ನ ಅಧಿಕೃತ X ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.
ಗುಜರಾತ್‌ನ ಕೆವಾಡಿಯಾದಲ್ಲಿ ಸೆಪ್ಟೆಂಬರ್ 22, 2026 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
- Advertisement -


