ಬೆಳ್ತಂಗಡಿ : ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿಯ ಕಟ್ಟಡದ ಮೇಲ್ಬಾಗದಲ್ಲಿ ಸಿಮೆಂಟ್ ಇದ್ದ ರಾಡ್ ಕಟ್ಟಿಂಗ್ ಮಾಡುತ್ತಿದ್ದಾಗ ಕೆಳಭಾಗದಲ್ಲಿದ್ದ ಕಾರ್ಮಿಕನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಸೆ.17 ರಂದು ಸಂಜೆ 4:30 ರ ಸುಮಾರಿಗೆ ನಡೆದಿದೆ.
ಬೆಳ್ತಂಗಡಿ ನಗರದ ಮೂರು ಮಾರ್ಗದ ಬಳಿಯ ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಮಳಿಗೆಯ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಮೇಲ್ಬಾಗದಲ್ಲಿ ರಾಡ್ ಸಹಿತ ಸಿಮೆಂಟ್ ತೆರವು ಮಾಡುವಾಗ ಆಯಾತಪ್ಪಿ ಒಂದು ತುಂಡು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ನಿವಾಸಿ ಆಲಿ ಮಗ ಝುಬೈರ್(22) ಎಂಬಾತನ ಮೇಲೆ ಬಿದ್ದಿದೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


