- Advertisement -
- Advertisement -
ಬಂಟ್ವಾಳ;ಕಳೆದ ವರ್ಷದ ಮೇ 27 ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ರಿಂದ 13 ನೇ ಆರೋಪಿಗಳಾಗಿರುವ 8 ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಭರತ್ ಕುಮ್ಡೇಲು, ಅಭಿನ್ ರೈ, ತೇಜಾಕ್ಷ, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ಹಾಗೂ ರಂಜಿತ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಉಷಾರಾಣಿ ಅವರು ವಾದ-ಪ್ರತಿವಾದ ಆಲಿಸಿ ಈ ಆದೇಶ ಹೊರಡಿಸಿದ್ದಾರೆ.
- Advertisement -


