- Advertisement -
- Advertisement -
ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಬೆಳಗ್ಗೆ ನಗರದ ಸ್ಟೇಟ್ ಬ್ಯಾಂಕ್ ಬಳಿ ಪ್ರತಿಭಟನೆ ನಡೆಯಿತು.
ಸ್ಟೇಟ್ ಬ್ಯಾಂಕ್‌ನ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ರಾಜ್ಯ ಮುಖಂಡ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮುಖಂಡರಾದ ಮೂನೀಶ್ ಅಲಿ ಹಾಗೂ ಅಶ್ರಫ್ ಅಡ್ಡೂರು ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
- Advertisement -


