Friday, September 18, 2026
Homeಕರಾವಳಿತುಳು ಭಾಷೆಗೆ ಅಧಿಕೃತ ಮಾನ್ಯತೆ, ಕನ್ಯಾಡಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಾಜ್ಯ ಸರ್ಕಾರಕ್ಕೆ ರಕ್ಷಿತ್...

ತುಳು ಭಾಷೆಗೆ ಅಧಿಕೃತ ಮಾನ್ಯತೆ, ಕನ್ಯಾಡಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಾಜ್ಯ ಸರ್ಕಾರಕ್ಕೆ ರಕ್ಷಿತ್ ಶಿವರಾಂ ಅಭಿನಂದನೆ

- Advertisement -
- Advertisement -

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ 2nd ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಿ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆ ಹಾಗೂ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರೊಂದಿಗೆ ಕನ್ಯಾಡಿಯ ಪುಣ್ಯಕ್ಷೇತ್ರವಾದ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ನೀಡುವ ಮೂಲಕ ಸರ್ಕಾರವು ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ವಿಶೇಷ ಗೌರವ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

“ಕರಾವಳಿ ಮಣ್ಣಿನಲ್ಲಿ ನಡೆದ ಈ ವಿಶೇಷ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ದಶಕಗಳ ಕಾಲದ ಹೋರಾಟ ಮತ್ತು ಆಶಯಗಳಿಗೆ ಸೂಕ್ತವಾಗಿ ಸ್ಪಂದಿಸಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಬೆಳೆಸಲು ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ತಿಳಿಸಿದ್ದಾರೆ.

ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ರಕ್ಷಿತ್ ಶಿವರಾಂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

- Advertisement -

Latest News

error: Content is protected !!